ರಾಜ್ಯದಲ್ಲಿ ಮುಂದುವರೆದ ಲೋಕಾರೇಡ್
ಯಾದಗಿರಿ: ನಗರದ ಸಂಚಾರಿ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೀಡಾದ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ನಗರದ ಟ್ರಾಫಿಕ್ ಪೊಲೀಸ್ ಠಾಣೆಯ ಪೇದೆ ನಾಗೇಶ್ ಎಂಬುವವರೇ ಲೋಕಾಯುಕ್ತ ದಾಳಿಗೆ ಸಿಕ್ಕಿಬಿದ್ದ ಲಂಚಬಾಕ ಖಾಕಿ ಅಧಿಕಾರಿಯಾಗಿದ್ದಾರೆ. ದೂರುದಾರ ಅನ್ನಯ್ಯ ರಾಠೋಡ್ ಎಂಬುವವರಿಗೆ ಸೇರಿದ ವಾಹನವು ಅಪಘಾತಕ್ಕೀಡಾಗಿದ್ದು, ಅದನ್ನು ಠಾಣೆಯಿಂದ ಬಿಡುಗಡೆ ಮಾಡಿಕೊಡಲು ನಾಗೇಶ್ 13 ಸಾವಿರ ರೂಪಾಯಿಗಳಿಗೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಅನ್ನಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಲಂಚದ ಹಣ ಪಡೆಯುತ್ತಿದ್ದಾಗಲೇ ಪೇದೆಯನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಂದಾರ್ ಅವರ ನೇತೃತ್ವದಲ್ಲಿ ನಡೆದ ಈ ಯಶಸ್ವಿ ದಾಳಿಯಲ್ಲಿ ಇನ್ಸ್‌ಪೆಕ್ಟರ್ ಸಿದ್ದರಾಯ ಬಳ್ಳೋರ್ಗಿ ಸೇರಿದಂತೆ ಹಲವು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಸದ್ಯ ಆರೋಪಿ ಪೇದೆಯನ್ನು ಬಂಧಿಸಿರುವ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.









Comments
Leave a Comment